ಗೋಕಾಕನಲ್ಲಿ ಶೀಘ್ರ ಕೈಗಾರಿಕಾ ಪ್ರದೇಶ

ರಮೇಶ ಜಾರಕಿಹೊಳಿ
ಗೋಕಾಕ ತಾಲೂಕಿನ ಶಿವಾಪುರ ಗ್ರಾಮದ ಮರಡಿಸಿದ್ದಪ್ಪ ದೇವಸ್ಥಾನದ ಹತ್ತಿರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಸ್ಥಳ ಪರಿಶೀಲನೆ ನಡೆಸಿದರು.
Advertisement

ಗೋಕಾಕ: ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
೪೦೦ ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಲಯ ತಲೆ ಎತ್ತಲಿದ್ದು, ಇದರಲ್ಲಿ ಹಲವು ಉದ್ಯಮಗಳು ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ.
ತಾಲೂಕಿನ ಶಿವಾಪುರ ಗ್ರಾಮದ ಮರಡಿಸಿದ್ದಪ್ಪ ದೇವಸ್ಥಾನದ ಹತ್ತಿರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಕೈಗಾರಿಕಾ ವಲಯ ಸ್ಥಾಪನೆಗೆ ಸೂಕ್ತ ಜಾಗ ಗುರುತಿಸಿದರು. ಬಹುತೇಕ ವಲಯ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದು ಕಾರ್ಯಾರಂಭಗೊಳ್ಳಲಿದೆ.
ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ, ಗೋಕಾಕ ಜನತೆ ಹಲವು ವರ್ಷಗಳ ಬೇಡಿಕೆ ಈಡೇರಿಸಲು ಹಾಗೂ ಜನರಿಗೆ ಸುಲಭವಾಗಿ ಉದ್ಯೋಗ ನೌಕರಿ ಒದಗಿಸಲು ಕೈಗಾರಿಕಾ ಪ್ರದೇಶ ನಿರ್ಮಾಣಗೊಳ್ಳುತ್ತಿದೆ. ಈ ಪ್ರದೇಶದಲ್ಲಿ ನೂರಾರು ಕಂಪನಿಗಳು ಕಾರ್ಖಾನೆ ಆರಂಭಿಸಲಿವೆ. ಜೊತೆಗೆ ಉದ್ಯಮಿದಾರರಿಗೂ ಕಾರ್ಖಾನೆ ನಿರ್ಮಿಸಲು ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದರು.

ರಮೇಶ ಜಾರಕಿಹೊಳಿ
ಗೋಕಾಕ ತಾಲೂಕಿನ ಶಿವಾಪುರ ಗ್ರಾಮದ ಮರಡಿಸಿದ್ದಪ್ಪ ದೇವಸ್ಥಾನದ ಹತ್ತಿರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಸ್ಥಳ ಪರಿಶೀಲನೆ ನಡೆಸಿದರು.