ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಕೆ.ಎಲ್‌ ರಾಹುಲ್ ಭೇಟಿ‌

Advertisement

ಚಿಕ್ಕಬಳ್ಳಾಪುರ: ಟೀ ಇಂಡಿಯಾ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್ ರಾಹುಲ್ ಪತ್ನಿಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಅತಿಯಾಶೆಟ್ಟಿ ಜತೆ ಶನಿವಾರ ಮಧ್ಯಾಹ್ನ ದೇವಸ್ಥಾನಕ್ಕೆ ಆಗಮಿಸಿದ ರಾಹುಲ್ ದೇವರ ದರ್ಶನ ಪಡೆದು ವಾಪಸಾಗಿದ್ದಾರೆ. ಈ ಹಿಂದೆಯೂ ರಾಹುಲ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.