ಚನ್ನಗಿರಿ  ಪ್ರಕರಣ: 23 ಜನರ ಬಂಧನ

Advertisement

ದಾವಣಗೆರೆ:  ಉದ್ರಿಕ್ತ ಗುಂಪಿನಿಂದ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರು 23 ಜನರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ದಾವಣಗೆರೆ ಜಿಲ್ಲಾ ಉಪಬಂಧಿಖಾನೆ ಕಳುಹಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ಠಾಣೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಜನರನ್ನು ಪರಿಶೀಲನೆ ಮಾಡುತ್ತಿರುವ ಪೊಲೀಸರು,  ದಾಂಧಲೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಈ ಘಟನೆಯಿಂದ ಪೊಲೀಸರು ತೀವ್ರ ಗತಿಯಲ್ಲಿ ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಘಟನೆಯಲ್ಲಿ ಭಾಗಿಯಾಗಿದ್ದ ಕೆಲವರು ತಲೆಮರೆಸಿಕೊಂಡಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದ ತತ್ತರಿಸಿದ್ದ ಚನ್ನಗಿರಿ ಪಟ್ಟಣದ ನಾಗರಿಕರು ಸಹಜ ಸ್ಥಿತಿಗೆ ಮರುಳಿದ್ದು, ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.