ಬೆಂಗಳೂರು: ಚಿತ್ರಕಲಾ ಪರಿಷತ್ತು ಅತ್ಯಂತ ವಿಶಿಷ್ಟ ಸಂಸ್ಥೆಯಾಗಿದ್ದು, ರಾಷ್ಟ್ರೀಯ ಮಟ್ಟಕ್ಕೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋದಲ್ಲಿ ಆಯೋಜಿಸಿರುವ 20ನೇ ಚಿತ್ರಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.
ಎನ್ಎಸ್‌ಡಿ ದೆಹಲಿಯಲ್ಲಿ ಅತ್ಯಂತ ಉನ್ನತ ಸ್ಥಾನವನ್ನು ಪಡೆದಿದೆ. ಬೆಂಗಳೂರಿಗೆ ಸೀಮಿತವಾಗದೆ ರಾಷ್ಟ್ರೀಯ ಮಟ್ಟಕ್ಕೆ ಬೆಳೆಯಬೇಕು. ರಾಷ್ಟ್ರೀಯ ಮಟ್ಟದಲ್ಲಿ ಈ ಸಂಸ್ಥೆಯನ್ನು ಕಟ್ಟಲು ಅಗತ್ಯ ನೆರವು, ಸಹಕಾರ ನೀಡಲಾಗುವುದು. ಬ್ರಾಂಡ್ ಬೆಂಗಳೂರನ್ನು ರಾಷ್ಟಮಟ್ಟಕ್ಕೆ ಕೊಂಡೊಯ್ಯಬಲ್ಲ ಸಂಸ್ಥೆಗಳಲ್ಲಿ ಚಿತ್ರಕಲಾ ಪರಿಷತ್ ಕೂಡ ಒಂದು. ಐಐಟಿ, ಐಐಎಂ, ಎನ್.ಎಸ್.ಎಲ್.ಯು ಮಟ್ಟಕ್ಕೆ ಬೆಳೆಯಬೇಕು ಎಂದರು.