ನವದೆಹಲಿ: ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆಂದು ಗಡಿ ವಿವಾದ ಸಂಬಂಧ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಉದ್ಧಟತನದ ಮಾತುಗಳನ್ನು ಆಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದಶಕಗಳಷ್ಟು ಹಳೆಯದಾದ ಗಡಿ ವಿವಾದವನ್ನು ಚರ್ಚೆಯ ಮೂಲಕ ಪರಿಹರಿಸಲು ನಾವು ಬಯಸುತ್ತಿದ್ದೇವೆ. ಆದರೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಬೆಂಕಿ ಹೊತ್ತಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ, ಈ ವಿಷಯದಲ್ಲಿ ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ.
ಚೀನಾ ಭಾರತದ ಗಡಿ ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯ ಅಗತ್ಯವಿಲ್ಲ, ನಾವು ಅದನ್ನು ಚರ್ಚೆಯ ಮೂಲಕ ಪರಿಹರಿಸಲು ಬಯಸುತ್ತೇವೆ. ಆದರೆ, ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆಂದಿದ್ದಾರೆ.