ಚೀನಾ ಮೂಲದ ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳ ನಿಷೇಧ

Advertisement

ನವದೆಹಲಿ: ಈ ಹಿಂದೆ ಟಿಕ್ ಟಾಕ್ ಸೇರಿದಂತೆ ಹಲವು ಚೀನೀ ಆ್ಯಪ್​ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಇದೀಗ ಚೀನಾ ಮೂಲದ 200ಕ್ಕೂ ಹೆಚ್ಚು ಲೋನ್ ಮತ್ತು ಬೆಟ್ಟಿಂಗ್ ಆ್ಯಪ್​ಗಳನ್ನು ನಿಷೇಧಿಸಲು ತುರ್ತು ಕ್ರಮ ಕೈಗೊಂಡಿದೆ. ಇದರಲ್ಲಿ 138 ಬೆಟ್ಟಿಂಗ್ ಆ್ಯಪ್​ಗಳು ಮತ್ತು 94 ಲೋನ್ ಆ್ಯಪ್​ಗಳು ಸೇರಿವೆ. ಈ ಆ್ಯಪ್​ಗಳನ್ನು ತಡೆಹಿಡಿಯಲು ಗೃಹ ಸಚಿವಾಲಯದಿಂದ ಈ ವಾರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಸೂಚನೆ ಹೋಗಿದ್ದು, ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಯೊಂದು ಹೇಳಿದೆ.