ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸ್ಪಂದನೆ ಇಲ್ಲದೆ, ಜನರ ರೋಧನೆ ನಡೆಯುತ್ತಿದೆ. ಸಚಿವರಾದ ಅರವಿಂದ್ ಲಿಂಬಾವಳಿ, ಮಾಧುಸ್ವಾಮಿಯಂತವರಿಂದ ಜನರ ನಿಂದನೆ ನಡೆಯುತ್ತಿದೆ ಎಂದು ಬಿಜೆಪಿ ಜನ ಸ್ಪಂದನೆ ಸಮಾವೇಶ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನೆರೆ, ಪ್ರವಾಹ, ಬೆಲೆ ಏರಿಕೆಯಂತವುಗಳಿಂದ ಜನರ ವೇದನೆ ನೋಡುತ್ತಿದ್ದೇವೆ. ಬಿಜೆಪಿ ಸಮಾವೇಶಕ್ಕೆ ಜನವೇದನೆ & ಜನರೋಧನೆ ಹೆಸರುಗಳೇ ಸೂಕ್ತ. ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಸಿಎಂ ಬೊಮ್ಮಾಯಿ ಅವರೇ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ..? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಕಿಡಿಕಾರಿದೆ.