ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಸಮ್ಮತಿ

Advertisement

ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡುವ ತಮಿಳುನಾಡು ಸರ್ಕಾರದ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಎನಿಮಲ್ಸ್ (ಪೇಟಾ) ಸೇರಿದಂತೆ ಪ್ರಾಣಿ ದಯಾ ಸಂಘಟನೆಗಳು ರಾಜ್ಯದಲ್ಲಿ ಈ ಕ್ರೀಡೆಗೆ ಅನುಮತಿ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದವು. ಜಲ್ಲಿಕಟ್ಟು ಪ್ರಾಣಿಗಳ ಮೇಲಿನ ಕ್ರೌರ್ಯವಾಗಿದ್ದು, ಅದನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದವು. ಈ ಕುರಿತು ಗುರುವಾರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ, ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆ ಎಂದು ಶಾಸಕಾಂಗವೇ ಘೋಷಣೆ ಮಾಡಿರುವಾಗ, ನ್ಯಾಯಾಂಗವು ವಿಭಿನ್ನ ಅಭಿಪ್ರಾಯ ಪ್ರಕಟಿಸುವುದು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಸಮ್ಮಿತಿ ಸೂಚಿಸಿದೆ.