ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಅವರಿಗೆ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಕೆಲ ತಿಂಗಳುಗಳ ಹಿಂದೆ ಸ್ವಾಮೀಜಿಗಳಿಗೆ ಕರ್ನಾಟಕ ಹೈಕೋರ್ಟ್ ಹಲವು ಷರತ್ತುಗಳೊಂದಿಗೆ ಜಾಮೀಜು ನೀಡಿತ್ತು. ಬಳಿಕ ಅರ್ಜಿದಾರರು ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಿ ನಾಶಪಡಿಸಬಹುದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶ ನೀಡಿದೆ.