ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದೆ,
ಆರೋಗ್ಯ ಇಲಾಖೆಯು ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸಮೀಪದ ಸೊಳ್ಳೆಗಳನ್ನು ಲ್ಯಾಬ್ನಲ್ಲಿ ಪರೀಕ್ಷಿಸಿತ್ತು. ಆಗ ಅಲ್ಲಿನ ಸೊಳ್ಳೆಗಳಲ್ಲಿ ಝಿಕಾ ಕಂಡುಬಂದಿದೆ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೊಳ್ಳೆಗಳಲ್ಲಿ ಮಾರಕ ವೈರಸ್ ಪತ್ತೆಯಾಗಿದೆ. ಆದರೆ ಮನುಷ್ಯರಲ್ಲಿ ರೋಗದ ಲಕ್ಷಣಗಳು ಗೋಚರಿಸಿಲ್ಲ. ಜಿಲ್ಲೆಯ ನಾಗರಿಕರಲ್ಲಿ ಝಿಕಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ್ ಸ್ಪಷ್ಟಪಡಿಸಿದ್ದಾರೆ.