ಜೂನ್ 12 ನೋಂದಣಿ ಗಡುವು: 2 ಕೋಟಿ ಪೈಕಿ 45 ಲಕ್ಷ HSRP ಅಳವಡಿಕೆ

Advertisement

ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.
2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.