ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಇಂದು ಜೆಡಿಎಸ್ ಸೇರ್ಪಡೆಗೊಂಡರು.
ಇಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಚ್.ಡಿ. ಕುಮಾರಸ್ವಾಮಿಯವರು ಹಾಲಹರವಿಯವರನ್ನು ಪಕ್ಷಕ್ಕೆ ಸ್ವಾಗತಿಸಿದರು.
2008ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು, ನಂತರದ 2013ರ ಚುನಾವಣೆಯಲ್ಲಿ ಪ್ರಸಾದ ಅಬ್ಬಯ್ಯ ಅವರ ವಿರುದ್ಧ ಸೋತಿದ್ದರು.