ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ಕೈಗೊಂಡಿದ್ದಾರೆ.