ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ಅನುಮತಿ

Advertisement

ನವದೆಹಲಿ: ವಾರಾಣಸಿಯ ನ್ಯಾಯಾಲಯವು ಹಿಂದೂ ಧರ್ಮದವರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದೆ.
ಹಿಂದೂಗಳು ಪೂಜೆ ಮಾಡಬಹುದಾಗಿದೆ. ಇದಕ್ಕಾಗಿ ಜಿಲ್ಲಾಡಳಿತವು 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಪುರಾತತ್ವ ಇಲಾಖೆ ಮಸೀದಿಯಲ್ಲಿ ಸರ್ವೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಮಂದಿರವನ್ನು ಕೆಡವಿ ಮಸೀದಿ ಕಟ್ಟಲಾಗಿಲ್ಲ, ಮಂದಿರದ ಮೇಲ್ಗಡೆ ಮಸೀದಿ ರಚನೆ ಮಾಡಲಾಗಿದೆ ಎಂದು ಸರ್ವೆ ವರದಿ ತಿಳಿಸಿತ್ತು. ಯಾಲಯದ ಆದೇಶದ ಪ್ರಕಾರ, ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶವಾದ ‘ವ್ಯಾಸ್ ಜೀ ಕಾ ತಹಖಾನಾ’ದಲ್ಲಿ ಹಿಂದೂ ಭಕ್ತರು ಈಗ ಪ್ರಾರ್ಥನೆ ಸಲ್ಲಿಸಬಹುದು.