ಹುಬ್ಬಳ್ಳಿ: ಲೋಕಸಭೆ ಟಿಕೆಟ್ ಹಂಚಿಕೆ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿವೆ, ಅದಕ್ಕೆ ಉತ್ತರ ಕೊಡಲ್ಲ. ಯಾರಿಗೆ ಟಿಕೆಟ್ ಕೊಡಬೇಕು ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳಬರಿಗೆ, ಮೂರು ಮತ್ತು ನಾಲ್ಕು ಬಾರಿ ಆಯ್ಕೆಯಾಗಿ ಬಂದವರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡುತ್ತಾರೆ ಎನ್ನುವುದು ಊಹಾಪೋಹ. ಈ ಹಿಂದೆ ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ. ಧಾರವಾಡ ಲೋಕಸಭಾದಿಂದ ಜಗದೀಶ ಶೆಟ್ಟರ್, ಲಿಂಗರಾಜ ಪಾಟೀಲ ಸೇರಿ ಮೂರು ಹೆಸರು ಹೋಗಿದೆ ಎಂಬ ಪ್ರಶ್ನೆಗೆ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಊಹಾಪೋಹಗಳಿಗೆ ನಾನು ಉತ್ತರಿಸುವುದಿಲ್ಲ ಎಂದರು.
ನರೇಂದ್ರ ಮೋದಿಯವರು ಸಿಲಿಂಡರ್ ದರ ನೂರು ರೂಪಾಯಿ ಇಳಿಸಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮಹಿಳೆಯರು ಮೋದಿಯವರನ್ನು ಮತ್ತೊಮ್ಮೆ ಬೆಂಬಲಿಸುವಂತೆ ಮನವಿ ಮಾಡುತ್ತೇನೆ ಎಂದರು.