ಡಮ್ಮಿ ಅಭ್ಯರ್ಥಿಗಳ ಸ್ಪರ್ಧೆ ತಡೆ ಸಾಧ್ಯವಿಲ್ಲ: ಸುಪ್ರೀಂ

ಸುಪ್ರೀಂ ಕೋರ್ಟ್‌
Advertisement

ನವದೆಹಲಿ: ಪ್ರಮುಖ ಅಭ್ಯರ್ಥಿಗಳ ಹೆಸರನ್ನೇ ಹೋಲುವ ಡಮ್ಮಿ ಅಭ್ಯರ್ಥಿಗಳು ಸ್ಪರ್ಧಿಸುವುದನ್ನು ತಡೆಯಬೇಕೆಂಬ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಪಾಲಕರು ತಮ್ಮ ಮಕ್ಕಳಿಗೆ ಲಾಲೂ ಪ್ರಸಾದ್ ಯಾದವ್ ಅಥವಾ ರಾಹುಲ್ ಗಾಂಧಿ ಎಂದು ಹೆಸರಿಟ್ಟರೆ ಅವರನ್ನು ತಡೆಯುವವರು ಯಾರು ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ನ್ಯಾಯಪೀಠ ಪ್ರಶ್ನಿಸುವ ಮೂಲಕ ಅರ್ಜಿಯ ವಿಚಾರಣೆ ಮಾಡಲು ನಿರಾಕರಿಸಿತು.
ಡಮ್ಮಿಯಾಗಿ ಸ್ಪರ್ಧಿಸುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕೆಂದು ಸಾಬು ಸ್ಟೀಫನ್ ಎಂಬ­ವರು ಅರ್ಜಿ ಸಲ್ಲಿಸಿ­ದ್ದರು. ಚುನಾವಣೆ ಮೇಲೆ ಪ್ರಭಾವ ಬೀರುವಂತೆ ಮಾಡಲು ಉದ್ದೇಶಪೂರ್ವಕವಾಗಿ ಇಂಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರಿಂದ ಮತದಾರರಲ್ಲಿ ಗೊಂದಲ ಉಂಟಾ­ಗುತ್ತಿದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿತ್ತು. ನಾಮಬಲದಿಂದಲೇ ಖ್ಯಾತನಾಮರು ಕೂಡಾ ಅನೇಕ ಬಾರಿ ಸೋಲು ಅನುಭವಿಸಿದ್ದಿದೆ. ಹೀಗಾಗಿ ಇಂಥ ಪ್ರಕರಣದಲ್ಲಿ ಚುನಾವಣಾ ಆಯೋಗ ಸಮಗ್ರವಾದ ತನಿಖೆ ನಡೆಸಿದ್ದಲ್ಲಿ ಸತ್ಯ ಕಂಡುಕೊಳ್ಳಲು ಸಾಧ್ಯ ಎಂದವರು ಮನವಿ ಮಾಡಿದ್ದರು. ಆದರೆ ಈ ಅರ್ಜಿ ವಿಚಾರಣೆಗೆ ಅರ್ಹರಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟ ನಂತರ ಅದನ್ನು ಹಿಂಪಡೆಯಲಾಗಿದೆ.