ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಏಪ್ರಿಲ್ 13ರವರೆಗೆ ವಿಸ್ತರಿಸಿದೆ.
ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಕೋರ್ಟ್ ಎರಡೂ ಅರ್ಜಿಗಳ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದ್ದು ಸದ್ಯ ಡಿಕೆಶಿ ನಿರಾಳರಾಗಿದ್ದಾರೆ.