ಡಿಜಿಟಲ್ ಶಿಕ್ಷಣಕ್ಕೆ ಒತ್ತು: ದೇಶದಲ್ಲಿ ‘ನ್ಯಾಷನಲ್ ಡಿಜಿಟಲ್ ಲೈಬ್ರರಿ’ ಸ್ಥಾಪನೆ

Advertisement

ನವದೆಹಲಿ: ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. “ರಾಜ್ಯಗಳಿಗೆ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳನ್ನು ಪ್ರವೇಶಿಸಲು ಮೂಲಸೌಕರ್ಯಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು” ಎಂದೂ ಈ ವೇಳೆ ಮಾಹಿತಿ ನೀಡಿದ್ದಾರೆ. ಮಕ್ಕಳು ಮತ್ತು ಹದಿಹರೆಯದವರಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ರಾಷ್ಟ್ರೀಯ ಪುಸ್ತಕ ಟ್ರಸ್ಟ್​​​ನ್ನು ನಿರ್ಮಿಸಲಾಗುತ್ತಿದೆ, ಮಕ್ಕಳ ಪುಸ್ತಕ ಟ್ರಸ್ಟ್​​ನ್ನು ​​ಪ್ರಾದೇಶಿಕ ಭಾಷೆಗಳು ಮತ್ತು ಇಂಗ್ಲಿಷ್‌ನಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ಈ ಡಿಜಿಟಲ್ ಲೈಬ್ರರಿಗಳ ಸ್ಥಾಪನೆ ಮತ್ತು ಕಾರ್ಯಾಚರಣೆಯಲ್ಲಿ ಎನ್‌ಜಿಒಗಳ ಸಹಯೋಗವೂ ಇರಲಿದೆ ಎಂದು ಘೋಷಿಸಿದ್ದಾರೆ.