ತಂದೆಯೊಂದಿಗೆ ಮತಚಲಾಯಿಸಿದ ಬಿಜೆಪಿ ಅಭ್ಯರ್ಥಿ ಕ್ಯಾವಟರ್

Advertisement

ಕುಷ್ಟಗಿ: ಕೊಪ್ಪಳ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ತಮ್ಮ ತಂದೆ ಮಾಜಿ ಶಾಸಕ ಕೆ.ಶರಣಪ್ಪ ಅವರ ಜೊತೆಗೆ ಪಟ್ಟಣದ ವಿದ್ಯಾನಗರದ ಮತಗಟ್ಟೆಯಲ್ಲಿ ಮತದಾನ ಮಾಡುವ ಮೂಲಕ ವಿಜಯ ಸಂಕೇತ ತೋರಿಸಿದರು. ನಂತರ ಕುಷ್ಟಗಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಬಿಜೆಪಿ ಪಕ್ಷದ ಪರವಾಗಿ ಮತ ಹಾಕುವಂತೆ ಕೇಳಿಕೊಳ್ಳುತ್ತಿದ್ದು ಕಂಡು ಬಂತು. ನಂತರ ಮಾತನಾಡಿದವರು ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ. ಇದರ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.