ಮೈಸೂರು: ಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. `ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.