ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನೂರಾರು ರೈತರು ಅನಿರ್ಧಿಷ್ಠಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ.
ತಾಲ್ಲೂಕಿನ ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆ ಬಳಿ ರೈತ ಸಂಘದ ತಮ್ಮ ಬೆಂಲಿಗ ಕಾರ್ಯಕರ್ತರು ಹಾಗೂ ಮುಖಂಡರುಗಳೊಂದಿಗೆ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಾವೇರಿ ನಿರ್ವಹಣಾ ಮಂಡಳಿ ಸಂಕಷ್ಟ ಸೂತ್ರ ಅನುಸರಿಸುತ್ತಿಲ್ಲ. ಸಾಕಷ್ಟು ಮಳೆಯಾಗದಿದ್ದರೂ, ಅಣೆಕಟ್ಟೆ ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಬಿಡಬೇಕೆಂದು ಆದೇಶಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ರಾಜ್ಯದ ಹಿತ ಕಾಪಾಡಬೇಕು. ತಮಿಳುನಾಡು ಹಾಗೂ ಪ್ರಾಧಿಕಾರದ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಮೊದಲು ನಮ್ಮ ರಾಜ್ಯದ ರೈತರ ಹಿತ ಮುಖ್ಯ. ಕೂಡಲೇ ನೀರನ್ನು ನಿಲ್ಲಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.