ದತ್ತಾಗೆ ಜಾಮೀನು ರಹಿತ ವಾರೆಂಟ್‌ ಜಾರಿ

ದತ್ತಾ
Advertisement

ಬೆಂಗಳೂರು: 2022ರಲ್ಲಿ ಸೋಮಶೇಖರ್ ಸೇರಿದಂತೆ ಇತರರು ದತ್ತಾ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇಂದು ಸಮನ್ಸ್ ಜಾರಿ ಮಾಡಿದೆ. ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ. ಏ.26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದ್ದಾರೆ.