ಹುಬ್ಬಳ್ಳಿ: ದಾಖಲೆಗಳಿಲ್ಲದ ಒಂದು ಕೋಟಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಣ ಸಾಗಿಸುತ್ತಿದ್ದ ವ್ಯಕ್ತಿಯಿಂದ ಉಪನಗರ ಪೊಲೀಸರು 1,14,70,000 ಹಣ ವಶಪಡಿಸಿಕೊಂಡಿದ್ದಾರೆ.
ಶನಿವಾರ ರಾತ್ರಿ ವೇಳೆಯಲ್ಲಿ ಯಾರೋ ಒಬ್ಬ ವ್ಯಕ್ತಿಯು ಹುಬ್ಬಳ್ಳಿ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದು ಅವನು ತನ್ನ ಬ್ಯಾಗಗಳಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮ ಹಣವನ್ನು ಸಾಗಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದಿದ್ದರ ಮೇರೆಗೆ ಆತನನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸ್ ಇನ್ಸಪೆಕ್ಟರ್ ಎಮ್.ಎಸ್. ಹೂಗಾರ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.