ರಾಯಚೂರು: ಕಾರಿನಲ್ಲಿ ದಾಖಲೆ ಇಲ್ಲದೆ 4 ಲಕ್ಷ ಹಣ ಸಾಗಿಸುತಿದ್ದಾಗ ಜಪ್ತಿ ಮಾಡಿದ ಘಟನೆ ನಡೆದಿದೆ.
ತಾಲೂಕಿನ ಸಿಂಗನೋಡಿ ಬಳಿಯ ಗಡಿಭಾಗದ ಚೆಕ್ ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಂಡಿದ್ದರಿಂದ ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿ ಹಾಗೂ ಪೊಲೀಸರಿಂದ ವಾಹನಗಳ ತಪಾಸಣೆ ನಡೆಸಿದ್ದು, ಈ ವೇಳೆ ನೀಲಿ ಬಣ್ಣದ ಮಾರುತಿ ಶಿಫ್ಟ್ ಡಿಸೈರ್ ಕಾರಿನಲ್ಲಿ ಯಾವುದೇ ಪೂರಕ ದಾಖಲೆಗಳಿಲ್ಲದೆ 4 ಲಕ್ಷ ರು. ಸಾಗಿಸುತಿದ್ದಾಗ ಪರಿಶೀಲನೆ ಸಮಯದಲ್ಲಿ ಹಣ ಪತ್ತೆಯಾಗಿದ್ದು, ವಶಕ್ಕೆ ಪಡೆದ ಆ ಹಣವನ್ನು ಜಿಲ್ಲಾ ಖಜಾನೆಗೆ ಜಮಾ ಮಾಡಿರುವುದಾಗಿ ಹಣ ಜಪ್ತಿ ಪರಿಹಾರ ಸಮಿತಿ ಅಧ್ಯಕ್ಷ, ಎಂಸಿಸಿ ನೋಡಲ್ ಅಧಿಕಾರ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಮ ತಿಳಿಸಿದ್ದಾರೆ.