ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಇಂದು ಸಲ್ಲಿಸಿದರು.
ಯಾವುದೇ ಮೆರವಣಿಗೆ ಇಲ್ಲದೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸ್ವಾಮೀಜಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವಾಮೀಜಿಯಿಂದ ನಗರದ ಟೌನ್ ಹಾಲ್ನಿಂದ ಮೆರವಣಿಗೆ ನಡೆಯಬೇಕಿತ್ತು. ಆದರೆ, ಮರೆವಣಿಗೆ ಮಾಡದೆ ಮೊದಲು ಸಾಂಕೇತಿಕವಾಗಿ ಒಂದು ಸೆಟ್ ನಾಮಪತ್ರವನ್ನು ಅವರು ಸಲ್ಲಿಸಿದರು. ಬಳಿಕ ಮೆರವಣಿಗೆ ಮೂಲಕ ಮತ್ತೊಮ್ಮೆ ಚುನಾವಣಾಧಿಕಾರಿಗಳ ಕಚೇರಿಗೆ ಬರಲಿದ್ದಾರೆ. ಈ ವೇಳೆ, ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಮೆರವಣಿಗೆ ಮಾಡಿ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಬಳಿಕ ಮಾಧ್ಯಮಗಳಿಗೆ ಹೆಚ್ಚಿನದನ್ನು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ಹೇಳಿ ತೆರಳಿದರು.