ನವದೆಹಲಿ: ಲವ್ ಜಿಹಾದ್ ಹಿನ್ನೆಲೆಯಿರುವ “ದಿ ಕೇರಳ ಸ್ಟೋರಿ” ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಕೆಎಂ ಜೊಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು ನಿರಾಕರಿಸಿದೆ. ವಕೀಲರಾದ ಕಪಿಲ್ ಸಿಬಾಲ್ ಹಾಗೂ ನಿಜಾಮ್ ಪಾಶಾಗೆ ಈ ಕುರಿತು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಪೀಠ ಸೂಚನೆ ನೀಡಿದೆ. ಈ ಚಿತ್ರವನ್ನು ಸೆನ್ಸಾರ್ ಮಂಡಳಿಯವರು ನೋಡಿದ್ದಾರೆ ಮತ್ತು ಅಲ್ಲಿಂದ ಪ್ರಮಾಣಪತ್ರ ಸಿಕ್ಕಿದೆ. ನೀವು ಸಿನಿಮಾನ ರಿಲೀಸ್ನ ಚಾಲೆಂಜ್ ಮಾಡಬೇಕು ಎಂದರೆ ಸೆನ್ಸಾರ್ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ಕೋರ್ಟ್ ಹೇಳಿದೆ.