ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಅಸಾರಾಂ
Advertisement

ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಗುಜರಾತ್​ನ ಗಾಂಧಿನಗರದ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಅಸಾರಾಂ ವಿರುದ್ಧ 2013ರಲ್ಲಿ ಮಾಜಿ ಶಿಷ್ಯೆ ಕೂಡ ಅತ್ಯಾಚಾರ ಆರೋಪ ಪ್ರಕರಣ ದಾಖಲಿಸಿದ್ದರು. ಸದ್ಯ ಈ ಪ್ರಕರಣದಲ್ಲೂ ಅಸಾರಾಂ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.