ನಕಲಿ ದಾಖಲೆ ಸೃಷ್ಟಿಸಿ ಶಾಲೆ ಆರಂಭ: ರುಪ್ಸಾ ಅಧ್ಯಕ್ಷ ಬಂಧನ

Advertisement

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆಯಲ್ಲಿರುವ ಲೋಕೇಶ್‌ ತಾಳಿಕಟ್ಟೆ ಅವರ ಮಾಲೀಕತ್ವದ ಸಾಂದೀಪಿನಿ ಇಂಟರ್‌ನ್ಯಾಷನಲ್‌ ರೆಸಿಡೆನ್ಸಿಯಲ್‌ ಶಾಲೆಯನ್ನು ಅನಧಿಕೃತವಾಗಿ ನಡೆಸಲಾಗುತ್ತಿತ್ತು. ನಕಲಿ NOC ಪತ್ರ ನೀಡಿ ಅಕ್ರಮವಾಗಿ CBSE ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದಿಪಿನಿ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಲೋಕೇಶ್​ ಅವರಿಗೆ ವಿಚಾರಣೆಗೆ ಕರೆದಿದ್ದಾರೆ. ಸದ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದ ಲೋಕೇಶ್ ಅವರು ವಿಚಾರಣೆ ಎದುರಿಸುತ್ತಿದ್ದಾರೆ.
ಇದಕ್ಕೆ ರಾಜ್ಯ ಸರ್ಕಾರದಿಂದ ಯಾವುದೇ ಎನ್‌ಒಸಿ ಪಡೆಯದೇ, ನಕಲಿ ದಾಖಲೆಯನ್ನು ಸೃಷ್ಟಿಸಿ ತಾವು ರಾಜ್ಯದಿಂದ ಎನ್‌ಒಸಿ ಪಡೆದಿರುವುದಾಗಿ ಕೇಂದ್ರದ ಸಿಬಿಎಸ್‌ಇ ಬೋರ್ಡ್‌ಗೆ ಸಲ್ಲಿಕೆ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರವು ನಕಲಿ ಎನ್‌ಒಸಿ ಪ್ರಮಾಣಪತ್ರವನ್ನು ಆಧರಿಸಿಯೇ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಯನ್ನು ಆರಂಭಿಸಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರದಿಂದ ಅನುಮತಿ ಪಡೆಯದೇ ವಂಚನೆ ಮಾಡಿದ್ದಾರೆ. ಹೀಗಾಗಿ, ಅವರನ್ನು ಪೊಲೀಸರು ಬಂಧಿಸಿದ್ದಾರೆ.