ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಮ್ ನಟಿ ಖುಷ್ಬೂ ಅವರ ಆರೋಗ್ಯ ಏರುಪೇರಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಖುಷ್ಬೂ ಅವರು ಜ್ವರ ಮತ್ತು ಬಾಡಿ ವೀಕ್‌ನೆಸ್‌ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ. ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನನ್ನು ಕೊಲ್ಲುತ್ತಿದೆ. ಆದರೆ ನಾನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಎಂದು ಬರೆದುಕೊಂಡಿದ್ದಾರೆ. ನಟಿ ಖುಷ್ಬೂ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನನ್ನ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕನ್ನಡದ ರಣಧೀರ, ಶಾಂತಿ ಕ್ರಾಂತಿ, ಹೃದಯಗೀತೆ, ಪಾಳೇಗಾರ ಸೇರಿದಂತೆ ಪರಭಾಷೆಗಳಲ್ಲೂ ನಟಿ ಖುಷ್ಬೂ ಸುಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ- ರಾಜಕೀಯ ಎರಡು ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ.