ಬೆಂಗಳೂರು : ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿ, ಗೆಲುವಿಗೆ ಕಾರಣರಾದ ನಟ ಶಿವರಾಜ್‌ಕುಮಾರ್ ಅವರ ಮನೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿ ಗೆಲುವಿಗೆ ಕಾರಣರಾಗಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಭೇಟಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಗೀತಾ ಶಿವರಾಜಕುಮಾರ್ ಅವರು ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮತ್ತು ಸಮೃದ್ಧಿಗೆ ನಾವು ಒಟ್ಟಾಗಿ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
