ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ: ಬಯ್ಯಾಪುರ

ಬಯ್ಯಾಪುರ
Advertisement

ಕುಷ್ಟಗಿ: ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲಿಗೆ ತಾವರಗೇರಾ ಪಟ್ಟಣ ಪಂಚಾಯತಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿದ್ದೇನೆ ವಾಲ್ಮೀಕಿ ಸಮುದಾಯದ ಮುಖಂಡರು ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರೀತಿ-ವಿಶ್ವಾಸದಿಂದ ಎಲ್ಲಾ ಸಮುದಾಯದವರನ್ನು ಕಾಣುತ್ತೇನೆ. ಯಾವುದಾದರೂ ಸಭೆ-ಸಮಾರಂಭಗಳು ನಡೆದರೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕೆಂಬ ವಿಷಯವನ್ನು ತಿಳಿಸಿದ್ದಾರೆ. ನಾನು ವಾಲ್ಮೀಕಿ ಜಯಂತಿ ಸೇರಿದಂತೆ ಎಲ್ಲಾ ಜಯಂತಿಗಳಲ್ಲಿ ಭಾಗವಹಿಸಿದ್ದೇನೆ ಎಂದರು.
ಅ. 9ರಂದು ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಮತ್ತು ಮಹರ್ಷಿ ವಾಲ್ಮೀಕಿ ವೃತ್ತವನ್ನು ಸಹ ಉದ್ಘಾಟಿಸಿದ್ದೇನೆ. ಕೆಲವೊಂದು ವ್ಯಕ್ತಿಗಳು ಆರೋಪ ಮಾಡಿದರೆ ನಾನು ಏನೂ ಹೇಳಬೇಕಾಗಿಲ್ಲ ಎಂದರು.
ಕೋವಿಡ್ ಸಂದರ್ಭದಲ್ಲಿ ನಾನು ಬೆಂಗಳೂರಿನಲ್ಲಿ ಕನಕದಾಸ ಜಯಂತಿಯಲ್ಲಿ ಭಾಗವಹಿಸಿದ್ದೇನೆ. ಜನರು ಸಹ ಯಾವುದೇ ರೀತಿ ತಪ್ಪು ಭಾವನೆ ಇಟ್ಟುಕೊಳ್ಳಬಾರದು ನನ್ನ ಮೇಲೆ ಎಂದರು.