ನನ್ನ ಮಗನಿಗೂ ಟಿಕೆಟ್‌ ಕೊಡಿ ಎಂದ ಸೋಮಣ್ಣ

ಸೋಮಣ್ಣ
Advertisement

ನನ್ನ ಮಗನಿಗೂ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೊಡಿ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ಗುಬ್ಬಿ ಕ್ಷೇತ್ರದ ಟಿಕೆಟ್‌ ಕೊಟ್ಟರೆ ನನ್ನ ಪುತ್ರ ಅರುಣ್ ಸೋಮಣ್ಣ ಖಂಡಿತವಾಗಿಯೂ ಗೆಲುವು ಸಾಧಿಸುತ್ತಾನೆ. ಹಲವಾರು ವರ್ಷಗಳ ಕಾಲ ಪಕ್ಷದಲ್ಲಿ ದುಡಿದಿರುವ ಅರುಣ ಕಾರ್ಯಕರ್ತರ ಜೊತೆ ಉತ್ತಮ ಒಡನಾಟವನ್ನು ಇಟ್ಟುಕೊಂಡಿದ್ದಾನೆ. ಬೇರೆಯವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಬೇಕೆಂದು ವರಿಷ್ಠರಿಗೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಇನ್ನು ವರುಣಾದಿಂದ ಸ್ಪರ್ಧೆ ಎಂಬುವುದು ಕೇವಲ ವಂದತಿ. ಸದ್ಯಕ್ಕೆ ಯಾರಿಗೂ ಟಿಕೆಟ್‌ ಫೈನಲ್‌ ಆಗಿಲ್ಲ ಎಂದರು.