ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ….

Advertisement

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದರಿಂದ ಮೆಟ್ರೋ ಆದಾಯ ಕುಸಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ

ಬೆಂಗಳೂರು: ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ. ಶಕ್ತಿ ಯೋಜನೆ ಕರ್ನಾಟಕದಾದ್ಯಂತ ಜಾರಿ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದರಿಂದ ಮೆಟ್ರೋ ಆದಾಯ ಕುಸಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಪೋಸ್ಟ್‌ ಮಾಡಿದ್ದು ಮೆಟ್ರೋ ಆದಾಯ ಹಾಗೂ ಶಕ್ತಿ ಯೋಜನೆ ಬಗ್ಗೆ ಪ್ರಧಾನಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಮೆಟ್ರೋ 130 ಕೋಟಿ ರೂ. ಆದಾಯ ಗಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಶೇ. 30ರಷ್ಟು ಏರಿಕೆ ಕಂಡಿದೆ. ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ. ಶಕ್ತಿ ಯೋಜನೆ ಕರ್ನಾಟಕದಾದ್ಯಂತ ಜಾರಿ ಮಾಡಲಾಗಿದೆ. ನಾವು ಬಡವರ ಬಗ್ಗೆ ಆಲೋಚಿಸಿ ಈ ಯೋಜನೆ ಜಾರಿ ಮಾಡಿದ್ದೇವೆ” ಎಂದು ತಿಳಿಸಿದರು. “ಕೋವಿಡ್ ಸಮಯದಲ್ಲಿ ಉಚಿತ ಬಸ್ ಪ್ರಯಾಣ ವ್ಯವಸ್ಥೆಗೆ ಒತ್ತಾಯ ಮಾಡಿದ್ದು ನಾವೇ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಮೊದಲು ಜಾರಿ ಮಾಡಿದ್ದು ಶಕ್ತಿ ಯೋಜನೆ. ಸಾರ್ವಜನಿಕರ ಅನುಕೂಲಕ್ಕೆ ಸಾರಿಗೆ ಇಲಾಖೆಯಿಂದ ಒಂದು ಸಾವಿರಕ್ಕೂ ಹೆಚ್ಚು ಹೊಸ ಬಸ್ ಗಳನ್ನು ಖರೀದಿ ಮಾಡಲಾಗಿದೆ. ಬಿಜೆಪಿಯವರಿಂದ ಇಂತಹ ಒಂದೇ ಒಂದು ಯೋಜನೆ ಜಾರಿ ಮಾಡಲು ಆಗಲಿಲ್ಲ” ಎಂದಿದ್ದಾರೆ.