ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ವತಿಯಿಂದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು, ಈ ಕಾರ್ಯಕ್ರಮದಲ್ಲಿ ಎನ್ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಬಳಿಕ ಮಾತನಾಡಿದ ಮೋದಿ ಅವರು “ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ, ಈ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಜನರಿಗೆ ಅರ್ಪಿಸುತ್ತೇನೆ, ಇದರೊಂದಿಗೆ ಪ್ರಶಸ್ತಿಯೊಂದಿಗೆ ಪಡೆದ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.