ನರೇಂದ್ರ ಮೋದಿ ಸ್ಟೇಡಿಯಂನಲ್ಲಿ: ಭಾರತ-ಆಸ್ಟ್ರೇಲಿಯಾ ಪ್ರಧಾನಿಗಳಿಂದ ಮೈದಾನದಲ್ಲಿ ರ‍್ಯಾಲಿ

Advertisement

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ. ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿಯವರು ರೋಹಿತ್​ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್​ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು. ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ‍್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್​ ಅಭಿಮಾನಿಗಳಿಗೆ ಕೈಬೀಸಿದರು.