ನವಿಮುಂಬಯಿಯಲ್ಲಿ ಶ್ರೀರಾಯರ ಶಾಖಾ ಮಠದ ಉದ್ಘಾಟನೆ

ಮಂತ್ರಾಲಯ
Advertisement

ರಾಯಚೂರು: ನವಿಮುಂಬಯಿಯ ಖರಘರ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳವರ ಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮ ಭಾನುವಾರ ನಡೆಯಿತು.
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀರಾಯರ ಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆಯನ್ನು ವಿಧಿ ವಿಧಾನಗಳನ್ನು ನೆರವೇರಿಸಿದರು. ಬೃಂದಾವನಕ್ಕೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.
ನಂತರ ಶ್ರೀ ಮೂಲ ರಾಮದೇವರ ರಥೋತ್ಸವಕ್ಕೆ ಚಾಲನೆ ನೀಡಿದರು. ನಂತರ ಶ್ರೀರಾಯರ ಶ್ರೀ ಮೂಲರಾಮದೇವರ ಪೂಜೆ ಹಾಗೂ ಮಂಗಳಾರತಿಯನ್ನು ಶ್ರೀಪಾದಂಗಳವರು ನೆರವೇರಿಸಿದರು. ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ತೀರ್ಥ ಪ್ರಸಾದ ಸ್ವೀಕರಿಸಿದರು. ನಂತರ ಶ್ರೀ ಸ್ವಾಮಿಗಳು ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಇದೇ ಸಂದರ್ಭದಲ್ಲಿ ಸಿಖ್ ಸಮುದಾಯದ ಭಕ್ತರು ಸಹ ಖಾರಘರ ಮಠಕ್ಕೆ ಭೇಟಿ ನೀಡಿ ಶ್ರೀ ರಾಯರ ದರ್ಶನ ಪಡೆದು ಶ್ರೀಗಳವರಿಂದ ಆಶೀರ್ವಾದ ಪಡೆದರು.