ನಾನೇ ಸಿಎಂ ಆಗಿ ಮುಂದುವರಿಯುವೆ

Advertisement

ಹೊಸಪೇಟೆ: ನಾನೇ ಸಿಎಂ ಆಗಿ ಮುಂದುವರೆಯುವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೊಸಪೇಟೆಗೆ ಬಂದ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ಐದು ವರ್ಷ ನೀವೇನಾ ಸಿಎಂ ಎನ್ನುವ ಪ್ರಶ್ನೆಗೆ ಉತ್ತರಿಸಿ, ನಾನೇ ಮುಂದುವರೆಯುವೆ ಎಂದಷ್ಟೇ ಹೇಳಿದರ. ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮ್ಯಾಂಡ್‌ಗೆ ಬಿಟ್ಟದ್ದು. ನಮ್ಮದು ನ್ಯಾಷನಲ್ ಪಾರ್ಟಿ, ಏನೆ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ತೆಗೆದುಕೊಳ್ಳುವುದು ಎಂದರು.
ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರ, ಅವರು ಸೊತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದ್ದೇ ಬಾಯಿಗೆ ಬಂದಂಗೆ ಮಾತಾಡ್ತಾನೆ. ರಾಜ್ಯದ ಜನ ನಮಗೆ ೧೩೬ ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡ್ತೇವೆ ಎಂದರು.
ಬಿಜೆಪಿಗರು ಭ್ರವನಿರಶನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರೋಕೆ ಆಗಲ್ಲ. ಮತ್ತೆ ಅಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು.
ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಮಕ್ಕಳು ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು