ನಾಯಕರಿಗೆ ಟೀಕಿಸಿದ್ದ ಶೆಟ್ಟರ್​ ಮತ್ತೆ ಬಂದರು.. ನಾನು ಗೆದ್ದ ಮೇಲೆ ವಜಾ ರದ್ದಾಗುತ್ತೆ

Advertisement

ಉಡುಪಿ: ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರಿಗೆ ಬೈದಿಲ್ಲ. ಇಂತಹ ವಜಾಗಳಿಗೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಕಂಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಆದರೆ ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.