ಬೆಂಗಳೂರು: ನಗರ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 438 ‘ನಮ್ಮ ಕ್ಲಿನಿಕ್’ಗಳನ್ನು ಜನವರಿ ಅಂತ್ಯದ ಒಳಗೆ ರಾಜ್ಯದಾದ್ಯಂತ ಆರಂಭವಾಗಲಿವೆ’ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು.
10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಣೆ ಮಾಡಲಿದ್ದು, ಜನವರಿ ಎರಡನೇ ವಾರದೊಳಗೆ ಕನಿಷ್ಠ 150 ಕ್ಲಿನಿಕ್‌ಗಳು ಜನರ ಸೇವೆಗೆ ಲಭ್ಯವಿರಲಿವೆ. ಈ ಕ್ಲಿನಿಕ್‌ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಕರಿಗೆ, ಕೂಲಿ ಕಾರ್ಮಿಕರಿಗೆ ಸೇರಿದಂತೆ ಹಲವರಿಗೆ ಉಚಿತ ಆರೋಗ್ಯ ಸೇವೆ ಸಿಗಲಿದೆ ಎಂದು ಹೇಳಿದರು.