ಚಿಕ್ಕಬಳ್ಳಾಪುರ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ 12 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಬೆಂಗಳೂರಿನತ್ತ ಹೊರಟಿದ್ದ ಟಾಟಾ ಸುಮೋ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮೋದಲ್ಲಿ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ 3 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.