ನಿಷೇಧದ ನಡುವೆಯೂ ಹೈದರಾಬಾದ್ ವಿವಿಯಲ್ಲಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಬ್ಯಾನ್‌
Advertisement

ಹೈದರಾಬಾದ್‌: ಬಿಬಿಸಿ ಚಿತ್ರಿಸಿರುವ ಸಾಕ್ಷ್ಯಚಿತ್ರವನ್ನು ಹೈದರಾಬಾದ್​ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್​ನಲ್ಲಿಯೇ ಪ್ರದರ್ಶಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ದ್ವೇಷಭಾವನೆಯ ಅಂಶಗಳುಳ್ಳ ಈ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿಷೇಧಿಸಲಾಗಿದ್ದರೂ, ಅದರ ಪ್ರದರ್ಶನ ನಡೆದಿದೆ.ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಮತ್ತು ಫ್ರೆಟರ್ನಿಟಿ ಗ್ರೂಪ್ ಎಂದು ಕರೆಯಲ್ಪಡುವ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯೊಳಗೆ ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸಿದೆ. ಈ ಗುಂಪುಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.