ನವದೆಹಲಿ: ನೀಟ್-2024 ರದ್ದತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.
ನೀಟ್ ಯುಜಿ ಪರೀಕ್ಷೆಯಲ್ಲಿ ಕೃಪಾಂಕ ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್ಟಿಎ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್ಟಿಎ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.