ಮಂಗಳೂರು: ಅಂಗಡಿಯೊಂದರ ಶಟರ್ನಲ್ಲಿ ಕಿಡಿಗೇಡಿಗಳು ‘ನೇಮ್ ಜಿಹಾದ್’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ನಲ್ಲಿ ನಡೆದಿದೆ.
ಅ. 11ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅ. 12ರಂದು ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಂಗಡಿ ಮಾಲಕ ಅಬ್ದುಲ್ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.