ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ನಗರದಲ್ಲಿರುವ ನೇಹಾ ನಿವಾಸಕ್ಕೆ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿರುವ ಅವರು ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ನೇಹಾ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿ ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಘಟನೆಯಾದ ಕೂಡಲೇ ಆರೋಪಿ ವಶಕ್ಕೆ ಪಡೆದು ಪೋಲಿಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಬಾಯಿಬಿಡುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಪರ್ಕ ಹೊಂದಿರಬಹುದೆಂಬ ಅನುಮಾನವಿದೆ. ಈ ಕುರಿತು ಸರ್ಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆ ಇದೆ. ಈ ಪ್ರಕರಣ ಮುಚ್ಚಿಹಾಕಲು ಕೆಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದರು.