ಹುಬ್ಬಳ್ಳಿ: ಪಂಚಮಸಾಲಿ 2 ಎ ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಲಾಗಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ನಿರಂತರವಾಗಿ ಭೇಟಿಯಾಗುತ್ತಿರುತ್ತೇನೆ. ಇದೇನು ಹೊಸದಲ್ಲ.ಶಿಗ್ಗಾವಿಯಲ್ಲಿ ಇದೇ ಮಾರ್ಚ್ 19 ರಂದು ಕಲ್ಯಾಣಮಂಟಪ ಉದ್ಘಾಟನೆ ಬಗ್ಗೆ ಚರ್ಚೆ ಮಾಡಲಾಯಿತು.
ಸಮಾಜದ ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ.ಸಿಎಂ ಕೂಡ ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದರು.
ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯದಿಂದ ಮೀಸಲಾತಿಗೆ ಹಿನ್ನೆಡರಯಾಗುತ್ತಿಲ್ಲ. ಈ ರೀತಿ ಹೇಳುವುದು ಅವರವರ ಕಲ್ಪನೆ ಮಾತ್ರ ಎಂದ ಅವರು ಈ ಬಗ್ಗೆ ಹೆಚ್ಚಿಗೆ ಮಾತನಾಡಲು ಇಷ್ಟಪಡುವುದಿಲ್ಲ. ನಮಗೆ ಸಾಮಾಜಿಕ ನ್ಯಾಯ ಸಿಗಬೇಕು ಎನ್ನುವುದು ನಮ್ಮ ಉದ್ದೇಶ. ಮೀಸಲಾತಿ ನಮ್ಮ ನಂಬಿಕೆ, ಭಾವನಾತ್ಮಕ ಹಾಗೂ ಕಾನೂನಾತ್ಮಕವಾಗಿದೆ. ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರ ಈ ವಿಚಾರದಲ್ಲಿ ತೆಗೆದುಕೊಳ್ಳೋ ನಿರ್ಧಾರದ ಬಗ್ಗೆ ನಾವು ಕಾಯುತ್ತಿದ್ದೇವೆ ಎಂದರು. ಮಠಾಧೀಶರನ್ನ ಚುನಾವಣಾ ಅಖಾಡಕ್ಕಿಳಿಸುವ ವಿಚಾರವಾಗಿ ನೋ ಕಮೆಂಟ್ಸ್ ಎಂದು ವಚನಾನಂದ ಸ್ವಾಮೀಜಿ ಹೇಳಿದರು.