ಬೆಂಗಳೂರು : 28 ವರ್ಷಗಳಿಂದ 2ಎ ಮೀಸಲಾತಿಗಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದು, ಈ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮಂಡಿಸುವ ನಿಟ್ಟಿನಲ್ಲಿ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಇಂದು(ಶನಿವಾರ) ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನ ವಚನಾನಂದ ಸ್ವಾಮೀಜಿ ಅವರು ಭೇಟಿಯಾದರು.