ದಾವಣಗೆರೆ: ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಮಾಡಾಳು ಪಕ್ಷೇತರ ಅಭ್ಯರ್ಥಿಯಾಗಿ ಚನ್ನಗಿರಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಕುರಿತು ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ನಡೆದ ಸಂಕಲ್ಪ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಅವರು, ಅಭಿಮಾನಿಗಳ ಒತ್ತಡದಿಂದಾಗಿ ಈ ನಿರ್ಧಾರ ಮಾಡಿರುವೆ. ಶೀಘ್ರದಲ್ಲಿಯೇ ನಾಮಪತ್ರ ಸಲ್ಲಿಸುವೆ. ಜನ ನಮ್ಮ ಮೇಲೆ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಗೆಲುವು ನನ್ನದಾಗಲಿದೆ ಎಂದರು.