ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನ ಬಂಧನ

Advertisement

ಮಂಡ್ಯ: 2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿರುವ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ. ಮಂಗಳವಾರ ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ಕನ್ನಂಬಾಡಿ ಕುಮಾರ್ ಎಂಬವರು ದೂರು ದಾಖಲಿಸಿದರು. ಇದರ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದರು. ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಕನಪುರ ರವಿ ಮತ್ತು ಇತರರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದು ಬಳಿಕ ರಾತ್ರಿಯೇ ರವಿ ಅವರನ್ನು ಬಂಧಿಸಿದ್ದಾರೆ.