ಪಾಕ್ ಪರ ಘೋಷಣೆ ಕೂಗಿದವನಿಗೆ ಶಾಸ್ತಿ ಆಗಬೇಕು

ಶೆಟ್ಟರ್
Advertisement

ಹುಬ್ಬಳ್ಳಿ: ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಶಕ್ತಿ ಕೇಂದ್ರದ ಇತಿಹಾಸದಲ್ಲೇ ಮೊದಲು. ಪಾಕಿಸ್ತಾನದ ಪರ ಘೋಷಣೆ ಕೂಗಿದವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಸಿರ್ ಹುಸೇನ್ ಪಕ್ಕದಲ್ಲೇ ನಿಂತಿದ್ದ ಬೆಂಬಲಿನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಸಿರ್ ಅವರು, ಆತನನ್ನು ಗದರಿಸುವ ಬದಲು ಪತ್ರಕರ್ತರ ಮೇಲೆ ರೇಗಿದ್ದಾರೆ. ಅಲ್ಲದೆ, ಗೂಂಡಾ ವರ್ತನೆ ತೋರಿದ್ದಾರೆ. ಹೀಗಾಗಿ ನಾಸಿರ್ ಹುಸೇನ್ ಅವರಿಗೂ ತಕ್ಕ ಶಾಸ್ತಿ ಆಗಬೇಕು ಎಂದರು.
ಪಾಕಿಸ್ತಾನದ ಮೆಂಟಾಲಿಟಿ ಹೊಂದಿರುವ ಕಾಂಗ್ರೆಸ್ ನಾಯಕರಿಗೆ ಅಲ್ಲಿನ ವಾಸ್ತವ ಸ್ಥಿತಿಯ ಬಗ್ಗೆ ಅರಿವಿಲ್ಲ. ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಘನಘೋರವಾಗಿದೆ. ಭಾರತದಂತಹ ರಾಷ್ಟ್ರ ಬೇಕು. ನರೇಂದ್ರ ಮೋದಿ ಅವರಂಥ ಪ್ರಧಾನಿ ಬೇಕು ಎಂದು ಸ್ವತಃ ಪಾಕಿಸ್ತಾನದ ಪ್ರಜೆಗಳು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಆದರೆ, ನಮ್ಮ ಅನ್ನ ಉಂಡವರೇ ದೇಶದ್ರೋಹಿ ಘೋಷಣೆ ಕೂಗುತ್ತಿರುವುದು ವಿಪರ್ಯಾಸ ಎಂದರು.