ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಒಕ್ಕಲಿಗರ ಸಂಘ ವಿರೋಧ

Advertisement

ಮದ್ದೂರು :- ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಸಮುದಾಯಗಳ ಜಮೀನನ್ನು ಸರ್ಕಾರದ ಅನುಮತಿ ಪಡೆಯದೇ ಪರಭಾರೆ ಮಾಡಿದರೆ ಮೂಲ ಮಂಜೂರಾತಿದಾರರಿಗೆ ವಾಪಸ್ ಕೊಡಲು ಅವಕಾಶ ಇರುವ ವಿಧೇಯಕ ವನ್ನು ಜಾರಿಗೆ ತರಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಶಿವಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) ತಿದ್ದುಪಡಿ ವಿಧೇಯಕವನ್ನು ಜಾರಿಗೊಳಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಒಕ್ಕಲಿಗ ಜನಾಂಗ ಸೇರಿದಂತೆ ವಿವಿಧ ಜನಾಂಗದವರು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಜಮೀನನ್ನ ನ್ಯಾಯಯುತವಾಗಿ ಪಡೆದಿದ್ದು ಅವರ ಜಮೀನನ್ನ ಬೇರೆ ಯಾರು ಪಡೆಯಬಾರದು ಪಡೆದಿದ್ದರೆ ಅದನ್ನು ವಾಪಸ್ಸು ಮಾಡಬೇಕೆಂಬ ಕಾನೂನನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಹೊರಟಿದೆ, ಕಾಯ್ದೆ ಜಾರಿಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಂತಹ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಬಿಜೆಪಿ ಸರ್ಕಾರ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮದ ವತಿಯಿಂದ 450ಕ್ಕೂ ಹೆಚ್ಚು ವಿದ್ಯಾವಂತ ನಿರುದ್ಯೋಗಿಗಳಿಗೆ ಟ್ಯಾಕ್ಸಿ ನೀಡಲು ಅನುಮೋದನೆ ನೀಡಿತ್ತು ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರದ್ದು ಮಾಡಿರುವುದು, ನಿರುದ್ಯೋಗಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಿಡಿಕಾರಿದರು. ನಿಗಮದ ನಿರುದ್ಯೋಗಿ ಫಲಾನುಭವಿಗಳಿಗೆ ಟ್ಯಾಕ್ಸಿ ವಾಹನ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದರು.